ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯ 15ನೇ ಆವೃತ್ತಿಯು ಪಂದ್ಯಗಳ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಆದರೆ ಏಪ್ರಿಲ್ 2ರಂದು ಚೆನ್ನೈಯಲ್ಲಿ ಟೂರ್ನಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.
ಈ ಬಾರಿಯ ಟೂರ್ನಿಯಲ್ಲಿ 10 ತಂಡಗಳು ಆಡಲಿದ್ದು, ಒಟ್ಟು 74 ಪಂದ್ಯಗಳು ನಡೆಯಲಿವೆ. ಒಟ್ಟು 60 ದಿನಗಳ ಕಾಲ ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಆಂತರಿಕ ಸಭೆಯಲ್ಲಿ ಚರ್ಚಿಸಿದೆ ಎನ್ನಲಾಗಿದೆ. ಈ ಲೆಕ್ಕಾಚಾರದ ಪ್ರಕಾರ, ಜೂನ್ ಮೊದಲ ವಾರಾಂತ್ಯದಲ್ಲಿ ಫೈನಲ್ ಪಂದ್ಯ ನಡೆಯುವ ನಿರೀಕ್ಷೆ ಇದೆ.
PublicNext
24/11/2021 02:17 pm