ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಶ್ಚಿತಾರ್ಥದ ಫೋಟೋ ಹಂಚಿಕೊಂಡ ಶಾರ್ದೂಲ್ ಠಾಕೂರ್

ಮುಂಬೈ : ಟೀಂ ಇಂಡಿಯಾ ವೇಗದ ಬೌಲರ್ ಶಾರ್ದೂಲ್ ಠಾಕೂರ್ ತಮ್ಮ ಬಹುಕಾಲದ ಗೆಳತಿ ಉದ್ಯಮಿ ಮಿಥಾಲಿ ಪರೂಲ್ಕರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂಬೈ ಕ್ರಿಕೆಟ್ ಸಂಸ್ಥೆಯ ಆವರಣದಲ್ಲಿ ನಡೆದ ಸರಳ ಸುಂದರ ಕಾರ್ಯಕ್ರಮದಲ್ಲಿ ಶಾರ್ದೂಲ್ ಠಾಕೂರ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಇನ್ನು ನಿಶ್ಚಿತಾರ್ಥದ ಕೆಲವು ಫೋಟೊಗಳನ್ನು ತಮ್ಮ ಇನ್ ಸ್ಟಾ ಖಾತೆಯಲ್ಲಿ ಹಂಚಿಕೊಂಡು "The beginning of forever" ಎಂದು ಬರೆದಿದ್ದಾರೆ. ಶಾರ್ದೂಲ್ ಠಾಕೂರ್ ಅವರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಪ್ತ ಸ್ನೇಹಿತರು ಹಾಗೂ ಕುಟುಂಬಸ್ಥರು ಸೇರಿ ಕೇವಲ 75 ಮಂದಿಗೆ ಮಾತ್ರ ಆಮಂತ್ರಣ ನೀಡಲಾಗಿತ್ತು.

ಶಾರ್ದೂಲ್ ಠಾಕೂರ್ ಹಾಗೂ ಮಿಥಾಲಿ ಪರೂಲ್ಕರ್ ಅವರ ವಿವಾಹವು 2022ರ ಐಸಿಸಿ ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Edited By : Nirmala Aralikatti
PublicNext

PublicNext

30/11/2021 12:53 pm

Cinque Terre

43.47 K

Cinque Terre

1

ಸಂಬಂಧಿತ ಸುದ್ದಿ