ಮುಂಬೈ: ಟೀಂ ಇಂಡಿಯಾ ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ಭರ್ಜರಿ ಬೌಲಿಂಗ್‌ಗೆ ನ್ಯೂಜಿಲೆಂಡ್ ತತ್ತರಿಸಿದ್ದು, ಕೇವಲ 62 ರನ್‌ಗಳಿಗೆ ಆಲೌಟ್ ಆಗಿದೆ.
ಮುಂಬೈನಲ್ಲಿ ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನ, ಬೌಲರ್ಗಳ ಆರ್ಭಟ ಜೋರಾಗಿದೆ. ದಿನದಾಟದ ಆರಂಭದಲ್ಲಿ ನ್ಯೂಜಿಲೆಂಡ್ ಎಡಗೈ ಸ್ಪಿನ್ನರ್ ಅಜಾಜ್ ಪಟೇಲ್ ಮಿಂಚಿದ್ರೆ, ನಂತರ ಎರಡನೇ ಮತ್ತು ಮೂರನೇ ಸೆಷನ್ನಲ್ಲಿ ಟೀಮ್ ಇಂಡಿಯಾ ಬೌಲರ್ಗಳು ಅತ್ಯುತ್ತಮ ದಾಳಿ ಸಂಘಟಿಸಿದರು.
ಟೀಂ ಇಂಡಿಯಾ ಸವಾಲಿನ 325 ರನ್‌ಗಳ ಮೊತ್ತಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ತಂಡಕ್ಕೆ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಆಘಾತ ನೀಡಿದರು. ನಂತರ ಸ್ಪಿನ್ನರ್ಗಳಾದ ಅಕ್ಷರ್ ಪಟೇಲ್, ಆರ್.ಅಶ್ವಿನ್ ಮತ್ತು ಜಯಂತ್ ಯಾದವ್, ವಾಂಖೆಡೆ ಪಿಚ್ನ ಟರ್ನಿಂಗ್ ಟ್ರ್ಯಾಕ್ನಲ್ಲಿ ಅದ್ಭುತ ಬೌಲಿಂಗ್ ದಾಳಿ ನಡೆಸಿದರು. ಪರಿಣಾಮ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 62 ರನ್‌ಗಳಿಗೆ ಆಲೌಟ್ ಆಯ್ತು. ಟೀಮ್ ಇಂಡಿಯಾ ಪರ ಆರ್.ಅಶ್ವಿನ್ 4 ವಿಕೆಟ್, ಮೊಹಮ್ಮದ್ ಸಿರಾಜ್ 3 ವಿಕೆಟ್, ಅಕ್ಷರ್ 2 ವಿಕೆಟ್ ಮತ್ತು ಜಯಂತ್ ಯಾದವ್ 1 ವಿಕೆಟ್ ಪಡೆದು ಕಿವೀಸ್ ಕುಸಿತಕ್ಕೆ ಕಾರಣರಾದರು.
PublicNext
04/12/2021 04:13 pm