ದುಬೈ: ಭಾರತ-ನ್ಯೂಜಿಲ್ಯಾಂಡ್ ನಡುವಿನ ಟೆಸ್ಟ್ ಸರಣಿ ಮುಕ್ತಾಯವಾಗುತ್ತಿದ್ದಂತೆ ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ರಿಲೀಸ್ ಆಗಿದೆ. ಟೀಂ ಇಂಡಿಯಾದ ಆರಂಭಿಕ ಆಟಗಾರ, ಕನ್ನಡಿಗ ಮಯಾಂಕ್ ಅಗರವಾಲ್ 30 ಸ್ಥಾನ ಮೇಲೆಕ್ಕೇರಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಮಯಾಂಕ್ ಅಗರವಾಲ್ ಕ್ರಮವಾಗಿ 150 ರನ್ ಹಾಗೂ 62 ರನ್ ಗಳಿಸಿದ್ದರು. ಜೊತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದರ ಬೆನ್ನಲ್ಲೇ ಇದೀಗ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅತ್ಯುತ್ತಮ ಜಿಗಿತ ಕಂಡಿದ್ದಾರೆ.
30 ಸ್ಥಾನ ಮೇಲೇರಿರುವ ಮಯಾಂಕ್ ಇದೀಗ 11ನೇ ರ‍್ಯಾಂಕ್ ಅಲಂಕರಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ರನ್ಗಳಿಕೆ ಮಾಡಿದ್ರೆ ಟಾಪ್ 10ರೊಳಗೆ ಎಂಟ್ರಿ ಕೊಡುವ ಸಾಧ್ಯತೆ ಇದೆ. ಇನ್ನು ರೋಹಿತ್ ಶರ್ಮಾ 5 ಸ್ಥಾನ ಹಾಗೂ ವಿರಾಟ್ ಕೊಹ್ಲಿ 6ನೇ ಸ್ಥಾನದಲ್ಲಿದ್ದಾರೆ.
PublicNext
08/12/2021 09:07 pm