ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ನೇತೃತ್ವದ 18 ಸದಸ್ಯರ ಬಲಿಷ್ಠ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ಡಿಸೆಂಬರ್ 26ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಆರಂಭಗೊಳ್ಳಲಿರುವ ಮೂರು ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ಈ ಟೆಸ್ಟ್ ಸರಣಿಯು ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿದೆ.
ಭಾರತ ತಂಡದಲ್ಲಿ ಕೆಲವೊಂದಿಷ್ಟು ಬದಲಾವಣೆ ಮಾಡಲಾಗಿದ್ದು, ಹನುಮ್ ವಿಹಾರಿ ಟೆಸ್ಟ್ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ಇನ್ನು ವಿಶ್ರಾಂತಿಯಲ್ಲಿದ್ದ ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ ತಂಡಕ್ಕೆ ಮರಳಿದ್ದಾರೆ. ಅಕ್ಷರ್ ಪಟೇಲ್, ಜಡೇಜಾ ಇಂಜುರಿಗೆ ಒಳಗಾದ ಕಾರಣ ಮತ್ತೊಬ್ಬ ಸ್ಪಿನ್ನರ್ ಆಗಿ ಜಯಂತ್ ಯಾದವ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರಿತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.
ಸ್ಟ್ಯಾಂಡ್‌ಬೈ ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಹರ್, ಅರ್ಜನ್ ನಾಗ್ವಾಸ್ವಾಲ್ಲಾ.
PublicNext
08/12/2021 09:19 pm