ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ದೀರ್ಘಾವಧಿಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಹಾರ್ದಿಕ್ ಪಾಂಡ್ಯ ಮೊದಲಿನಂದಲೂ ಇಂಜುರಿಯಿಂದ ಬಳಲುತ್ತಿದ್ದಾರೆ. ಹೀಗಾಗಿ ಟೆಸ್ಟ್ನಿಂದ ನಿವೃತ್ತಿ ಹೊಂದಲು ಬಯಸಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಪಾಂಡ್ಯ ಈ ಬಗ್ಗೆ ಇನ್ನೂ ಅಧಿಕೃತವಾಗಿ ಮಂಡಳಿಗೆ ತಿಳಿಸಿಲ್ಲ. ಪಾಂಡ್ಯ ಕಂಬ್ಯಾಕ್ ಮಾಡುವ ಯೋಜನೆಯಲ್ಲಿದ್ದಾರೆ. ಆದರೆ ಗಾಯದ ಕಾರಣ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದಿಂದ ಕೂಡ ಹೊರಬಿದ್ದಿದ್ದಾರೆ. ಹೀಗಾಗಿ ಏಕದಿನ ಹಾಗೂ ಟಿ20 ಮಾದರಿ ಕ್ರಿಕೆಟ್ ಬಗ್ಗೆ ಗಮನಹರಿಸಲು ಪಾಂಡ್ಯ ಚಿಂತಿಸಿದ್ದಾರೆ.
PublicNext
08/12/2021 10:58 pm