ಜೋಹಾನ್ಸ್ಬರ್ಗ್: ಇಂದು ಆರಂಭವಾದ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಬೆನ್ನು ನೋವಿನ ಸಮಸ್ಯೆಯಿಂದಾಗಿ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಆಡುತ್ತಿಲ್ಲ. ಹೀಗಾಗಿ ಉಪ ನಾಯಕ ಕೆ.ಎಲ್ ರಾಹುಲ್ ಅವರು ಇದೇ ಮೊದಲ ಬಾರಿಗೆ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಮಯಾಂಕ್ ಅಗರವಾಲ್ ಅವರು ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಕೊಹ್ಲಿ ಗಾಯಗೊಂಡು ಪಂದ್ಯದಿಂದ ದೂರ ಉಳಿದಿರುವುದರಿಂದ ಹನುಮ ವಿಹಾರಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಹೀಗಿದೆ ತಂಡ: ಕೆ.ಎಲ್ ರಾಹುಲ್ (ನಾಯಕ), ಮಯಂಕ್ ಅಗರವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ಅಜಿಂಕ್ಯಾ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ(ಉಪ ನಾಯಕ), ಮೊಹಮ್ಮದ್ ಸಿರಾಜ್
PublicNext
03/01/2022 02:20 pm