ಕೇಪ್ ಟೌನ್: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ನಾನು "ಸಂಪೂರ್ಣವಾಗಿ ಫಿಟ್" ಆಗಿರುವುದರಿಂದ ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ನಿರ್ಧರಿಸುವ ಮೂರನೇ ಟೆಸ್ಟ್ ಗೆ ತಂಡಕ್ಕೆ ಮರಳುವುದಾಗಿ ಹೇಳಿದ್ದಾರೆ.
ಇಂದು ಮಧ್ಯಾಹ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೊಹ್ಲಿ ಬೆನ್ನುಮೂಳೆಯ ಸೆಳೆತದಿಂದಾಗಿ ಎರಡನೇ ಟೆಸ್ಟ್ನಿಂದ ಹೊರಗುಳಿದಿದ್ದೆ. ಆದರೆ ಈಗಾ ನಾನು ಸಂಪೂರ್ಣವಾಗಿ ಫಿಟ್ ಆಗಿದ್ದೇನೆ ಎಂದು ಹೇಳಿದ್ದಾರೆ.
ಭಾರತ vs ದಕ್ಷಿಣ ಆಫ್ರಿಕಾ, 3 ನೇ ಟೆಸ್ಟ್ ನಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆಲ್ಲುವ ಗುರಿಯಲ್ಲಿ ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲೆ ನೆಟ್ಟಿರುವುದಂತೂ ಸುಳ್ಳಲ್ಲ. ಮಂಡಿ ನೋವಿನಿಂದಾಗಿ ಸಿರಾಜ್ ಪಂದ್ಯದಿಂದ ಹೊರಗುಳಿದಿದ್ದಾರೆ.
PublicNext
10/01/2022 04:16 pm