ನವದೆಹಲಿ: ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಇಂದು ತಮ್ಮ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಟೀಂ ಇಂಡಿಯಾ ಟಿ20, ಏಕದಿನ ತಂಡ ನಾಯಕತ್ವಕ್ಕೆ ಇತ್ತೀಚೆಗಷ್ಟೆ ಕೆಳಗಿಳಿದಿದ್ದ ಕೊಹ್ಲಿ ಇಂದು (ಶನಿವಾರ) ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿ ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದಾರೆ.
ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಅನೇಕ ದಾಖಲೆ ಹಾಗೂ ಸಾಧನೆ ಮಾಡಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ಭಾರತಕ್ಕೆ ಅತಿ ಹೆಚ್ಚು ಗೆಲುವು ತಂದು ಕೊಟ್ಟ ಸಾಧನೆಯನ್ನು ಕೊಹ್ಲಿ ಮಾಡಿದ್ದಾರೆ. ಅವರು ಒಟ್ಟು 68 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿ 40 ಪಂದ್ಯಗಳಲ್ಲಿ ಗೆಲುವು ತಂದುಕೊಟ್ಟಿದ್ದಾರೆ.
ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ಭಾರತ ಅಷ್ಟೇ ಅಲ್ಲದೆ ಏಷ್ಯಾದ ಏಕೈಕ ಕ್ಯಾಪ್ಟನ್ ವಿರಾಟ್ ಕೊಹ್ಲಿ ಆಗಿದ್ದಾರೆ. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಆಸೀಸ್ ಪಡೆಯನ್ನು ಸೋಲಿಸಿದ ಟೀಂ ಇಂಡಿಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿ ಅವರಿಗೆ ಇದೆ.
PublicNext
15/01/2022 09:02 pm