ಮುಂಬೈ: ವಿರಾಟ್ ಕೊಹ್ಲಿ ನಾಯಕ ಸ್ಥಾನದಿಂದ ಇಳಿದ ಬಳಿಕ ಮುಂದಿನ ಟೀಂ ಇಂಡಿಯಾದ ಟೆಸ್ಟ್ ನಾಯಕ ಯಾರು ಎಂಬ ಅಭಿಮಾನಿಗಳ ಪ್ರಶ್ನೆಗೆ ಬಿಸಿಸಿಐ ಪ್ರತಿಕ್ರಿಯಿಸಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರು, ಮುಂದಿನ ಟೆಸ್ಟ್ ನಾಯಕನ ಹೆಸರನ್ನು ಆಯ್ಕೆ ಸಮಿತಿ ಶಿಫಾರಸು ಮಾಡುತ್ತದೆ. ಇನ್ನೂ ಯಾವುದೇ ಹೆಸರನ್ನು ಚರ್ಚಿಸಲಾಗಿಲ್ಲ ಎಂದರು.
ಕೆ.ಎಲ್.ರಾಹುಲ್ ಪ್ರಮುಖ ಆಯ್ಕೆಯಾಗಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಧಿಕಾರಿ, ಆಯ್ಕೆದಾರರು ಎಲ್ಲಾ ಆಯ್ಕೆಗಳನ್ನು ಪರಿಶೀಲಿಸಿ ಅಂತಿಮವಾಗಿ ಶಿಫಾರಸು ಮಾಡುತ್ತಾರೆ. ರೋಹಿತ್ ಶರ್ಮಾ ಅವರು ತಂಡದ ನಿಯೋಜಿತ ಉಪನಾಯಕರಾಗಿದ್ದು, ವಿರಾಟ್ ಕೊಹ್ಲಿ ಬದಲಿಗೆ ಯಾರನ್ನು ಟೆಸ್ಟ್ ನಾಯಕರನ್ನಾಗಿ ಮಾಡಬೇಕೆಂದು ನಿರ್ಧರಿಸಲು ಸಾಕಷ್ಟು ಸಮಯ ಬೇಕು. ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರು ಸರಿಯಾದ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
PublicNext
17/01/2022 10:15 pm