ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಗೂಲಿ-ವಿರಾಟ್ ಮಧ್ಯೆ ವೈಮನಸ್ಸು: ಶೋಕಾಸ್ ನೋಟಿಸ್ ನೀಡಿದ್ರಾ?

ನವದೆಹಲಿ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಟೀಮ್ ಇಂಡಿಯಾ ನಿರ್ಗಮಿತ ನಾಯಕ ವಿರಾಟ್ ಕೊಹ್ಲಿ ನಡುವೆ ಮತ್ತೆ ಮನಸು ಮುದುಡಿದೆ. ನಾಯಕ ಸ್ಥಾನದಿಂದ ಕೊಹ್ಲಿಯನ್ನು ಕೆಳಗಿಳಿಸಿದ್ದೇ ಇದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.

ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನ ಏಕದಿನ ತಂಡದ ನಾಯಕತ್ವದಿಂದ ಕೊಹ್ಲಿಯನ್ನು ವಜಾಗೊಳಿಸಲಾಗಿತ್ತು. ಇದಕ್ಕೂ ಮುನ್ನ ಕೊಹ್ಲಿ ಟಿ20 ನಾಯಕತ್ವ ತ್ಯಜಿಸಿದ್ದರು. ಆದರೆ ವಿರಾಟ್ ಕೊಹ್ಲಿ ಟಿ20 ನಾಯಕತ್ವವನ್ನು ತ್ಯಜಿಸಿದ ಕಾರಣ ಅವರನ್ನು ಏಕದಿನ ತಂಡದ ನಾಯಕ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ಬಿಸಿಸಿಐ ಸ್ಪಷ್ಟನೆ ನೀಡಿತ್ತು.

ಅಲ್ಲದೇ ಈ ವೇಳೆ ಗಂಗೂಲಿ ನಾನು ಕೊಹ್ಲಿಗೆ ಟಿ20 ನಾಯಕತ್ವ ತ್ಯಜಿಸದಂತೆ ಮನವಿ ಮಾಡಿದ್ದೆ ಎಂದು ತಿಳಿಸಿದ್ದರು. ಆದರೆ ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೊಹ್ಲಿ, ಟಿ20 ನಾಯಕತ್ವವನ್ನು ಬಿಟ್ಟುಕೊಡದಂತೆ ಯಾರೂ ಕೂಡ ನನಗೆ ಹೇಳಿಲ್ಲ ಎಂದಿದ್ದರು. ನನ್ನೊಂದಿಗೆ ಈ ಬಗ್ಗೆ ಯಾರು ಕೂಡ ಚರ್ಚಿಸಿಲ್ಲ. ಏಕದಿನ ತಂಡದ ನಾಯಕನ ಸ್ಥಾನದಿಂದ ಕೆಳಗಿಳಿಸುವ ಗಂಟೆಗೂ ಮೊದಲು ನನಗೆ ಕರೆ ಮಾಡಿ ತಿಳಿಸಿದ್ದರು ಎಂದು ಕೊಹ್ಲಿ ಹೇಳಿದ್ದರು. ಇತ್ತ ಕೊಹ್ಲಿಯ ಬಹಿರಂಗ ಹೇಳಿಕೆಯಿಂದ ಗಂಗೂಲಿ ಕೂಡ ಮುಜುಗರಕ್ಕೊಳಗಾಗಿದ್ದರು. ಹೀಗಾಗಿ ವಿರಾಟ್ ಕೊಹ್ಲಿಗೆ ನೋಟಿಸ್ ಕಳುಹಿಸಲು ಸಿದ್ಧತೆ ನಡೆಸಿದ್ದರು ಎಂದು ಎಂದು ಮೂಲಗಳಿಂದ ತಿಳಿದುಬಂದಿದೆ.

Edited By : Nagaraj Tulugeri
PublicNext

PublicNext

21/01/2022 06:30 pm

Cinque Terre

60.87 K

Cinque Terre

1

ಸಂಬಂಧಿತ ಸುದ್ದಿ