ಕೇಪ್‌ಟೌನ್: ಕ್ವಿಂಟನ್ ಡಿ ಕಾಕ್ ಅಬ್ಬರದ ಶತಕ ಹಾಗೂ ರಾಸ್ಸಿ ವ್ಯಾನ್ ಡೆರ್ ಡುಸೆನ್ ಅರ್ಧಶತಕದ ಸಹಾಯದಿಂದ ದಕ್ಷಿಣ ಆಫ್ರಿಕಾ ತಂಡವು ಟೀಂ ಇಂಡಿಯಾಗೆ 288 ರನ್‌ಗಳ ಗುರಿ ನೀಡಿದೆ.
ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಕೆ.ಎಲ್.ರಾಹುಲ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 49.5 ಓವರ್‌ಗೆ ಎಲ್ಲ 10 ವಿಕೆಟ್ ಕಳೆದುಕೊಂಡು 287 ರನ್ ಗಳಿಸಿದೆ.
ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿ ಕಾಕ್ 124 ರನ್, ರಾಸ್ಸಿ ವ್ಯಾನ್ ಡೆರ್ ಡುಸೆನ್ 52 ರನ್, ಡೇವಿಡ್ ಮಿಲ್ಲರ್ 39 ರನ್ ಗಳಿಸಿದರು. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದರು. ಕನ್ನಡಿಗ ಪ್ರಸಿದ್ಧ ಕೃಷ್ಣ 3 ವಿಕೆಟ್ ಕಿತ್ತು ಮಿಂಚಿದರೆ, ದೀಪಕ್ ಚಹರ್ ಹಾಗೂ ಜಸ್‌ಪ್ರೀತ್ ಬುಮ್ರಾ ತಲಾ 2 ವಿಕೆಟ್, ಯಜುವೇಂದ್ರ ಚಹಾಲ್ 1 ವಿಕೆಟ್ ಪಡೆದು ತಂಡಕ್ಕೆ ಆಸರೆಯಾದರು. ಇನ್ನು ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡ ಮೂರು ಓವರ್ ಬೌಲಿಂಗ್ ಮಾಡಿ 21 ರನ್ ನೀಡಿದರು.
PublicNext
23/01/2022 06:13 pm