ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs SA 3rd ODI: 64ನೇ ಅರ್ಧ ಶತಕವನ್ನು ಪುತ್ರಿಗೆ ಅರ್ಪಿಸಿದ ಕೊಹ್ಲಿ

ಕೇಪ್‌ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದ ಸರಣಿಯಲ್ಲಿ 3-0 ಅಂತರದಿಂದ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ವಿರಾಟ್ ಕೊಹ್ಲಿ, ಶಿಖರ್ ಧವನ್ ಹಾಗೂ ದೀಪಕ್ ಚಹಾರ್ ಅರ್ಧಶತಕದ ಹೋರಾಟದ ನಡುವೆಯೂ ಭಾರತ ಸೋಲಿಗೆ ಸಿಲುಕಿತು.

ಈ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಅವರಿಗೆ ಅರ್ಧ ಶತಕವನ್ನು ಶತಕವನ್ನಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ದಕ್ಷಿಣ ಆಪ್ರಿಕಾ ವಿರುದ್ಧ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ 84 ಎಸೆತಗಳಲ್ಲಿ 65 ರನ್‌ಗಳನ್ನು ಗಳಿಸಿ ಕೇಶವ್ ಮಹಾರಾಜ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಸೇರಿಕೊಂಡರು.

ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿಯೂ ತಮ್ಮ 71ನೇ ಶತಕವನ್ನು ಬಾರಿಸಲು ವಿಫಲವಾಗಿದ್ದು ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದೆ. ಆದರೆ ವಿರಾಟ್ ಕೊಹ್ಲಿ 64ನೇ ಅರ್ಧಶತಕವನ್ನು ಪೂರ್ಣಗೊಳಿಸಿದರು. ಈ ಸಂದರ್ಭದಲ್ಲಿ ಪತ್ನಿ ಅನುಷ್ಕಾ ಶರ್ಮಾ ಹಾಗೂ ಪುತ್ರಿ ವಾಮಿಕಾ ಕೂಡ ಸಾಕ್ಷಿಯಾಗಿದ್ದರು. ವಿರಾಟ್ ಕೊಹ್ಲಿ ತಮ್ಮ ಅರ್ಧ ಶತಕವನ್ನು ಪುತ್ರಿಗೆ ಅರ್ಪಿಸಿ ಸಂಭ್ರಮಿಸಿದ್ದಾರೆ.

Edited By : Vijay Kumar
PublicNext

PublicNext

24/01/2022 08:21 am

Cinque Terre

39.18 K

Cinque Terre

0

ಸಂಬಂಧಿತ ಸುದ್ದಿ