ನವದೆಹಲಿ: ಫೆಬ್ರವರಿ 6ರಿಂದ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಬಿಸಿಸಿಐ, ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಗಾಯದ ಸಮಸ್ಯೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟೂರ್ನಿಗೆ ಅಲಭ್ಯರಾಗಿದ್ದ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ರೋಹಿತ್ ಅನುಪಸ್ಥಿತಿ ಕಾರಣ ಕೆ.ಎಲ್.ರಾಹುಲ್ ಸಾರಥ್ಯದಲ್ಲಿ ಆಡಿದ್ದ ಟೀಂ ಇಂಡಿಯಾ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಹೀನಾಯವಾಗಿ ಸೋತಿತ್ತು. ಇದೀಗ ರೋಹಿತ್ ತಂಡಕ್ಕೆ ಹಿಂದಿರುಗಿದ್ದು, ವಿಂಡೀಸ್ ವಿರುದ್ಧದ ತಲಾ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಮತ್ತು ಟಿ20 ಕ್ರಿಕೆಟ್ ಸರಣಿಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಏಕದಿನ ಸರಣಿಗೆ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಋತುರಾಜ್, ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಶ್ನೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್.
ಟಿ-20 ಸರಣಿಗೆ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಇಶಾನ್ ಕಿಶಾನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಶ್ನೋಯ್, ಅಕ್ಷರ್ ಪಟೇಲ್, ಯಜುವೇಂದ್ರ ಚಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್, ಅವೇಶ್ ಖಾನ್.
PublicNext
27/01/2022 07:38 am