ಕೋಲ್ಕತ್ತಾ: ನಾಯಕ ನಿಕೋಲಸ್ ಪೂರನ್ ಹಾಗೂ ರೋವ್ಮನ್ ಪೊವೆಲ್ ಸ್ಫೋಟಕ ಬ್ಯಾಟಿಂಗ್ ನಡುವೆಯೂ ವೆಸ್ಟ್ ಇಂಡೀಸ್ ತಂಡವು ಭಾರತದ ವಿರುದ್ಧ 8 ರನ್‌ಗಳಿಂದ ಸೋಲು ಕಂಡಿದೆ. ಈ ಮೂಲಕ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಏಕದಿನ ಸರಣಿ ಬೆನ್ನಲ್ಲೇ ಟಿ20 ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಇಂದು ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ದಾಖಲಿಸಿತ್ತು. 187 ರನ್‌ಗಳ ಗುರಿ ಬೆನ್ನತ್ತಿದ ವಿಂಡೀಸ್ ತಂಡವು 3 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಲು ಶಕ್ತಾಯಿತು.
ಭಾರತದ ಪರ ರವಿ ಬಿಷ್ಣೋಯಿ, ಯಜುವೇಂದ್ರ ಚಹಾಲ್ ಹಾಗೂ ಭುವನೇಶ್ವರ್ ಕುಮಾರ್ ತಲಾ ಒಂದು ವಿಕೆಟ್ ಪಡೆದರು. ಇದಕ್ಕೂ ಮುನ್ನ ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ 52 ರನ್, ರಿಷಭ್ ಪಂತ್ ಅಜೇಯ 52 ರನ್ ಹಾಗೂ ವೆಂಕಟೇಶ್ ಅಯ್ಯರ್ 33 ರನ್ ಗಳಿಸಿದ್ದರು. ಇಶಾನ್ ಕಿಶನ್ ಇಂದಿನ ಪಂದ್ಯದಲ್ಲೂ ಬ್ಯಾಟಿಂಗ್ ವೈಫಲ್ಯ ತೋರಿದ್ದರು. ಅವರು 2 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ನಾಯಕ ರೋಹಿತ್ ಶರ್ಮಾ 19 ರನ್ ಹಾಗೂ ಸೂರ್ಯಕುಮಾರ್ ಯಾದವ್ 8 ರನ್ ಗಳಿಸಲು ಶಕ್ತರಾಗಿದ್ದರು.
PublicNext
18/02/2022 10:53 pm