ಲಕ್ನೋ: ಭಾರತ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕದಿನ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಅನುಭವಿ ಬ್ಯಾಟರ್ ಗಳ ಕೊರತೆ ಕಾಡುತ್ತಿದೆ. ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್ ಹಾಗೂ ರಿಷಭ್ ಪಂತ್ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಅಲಭ್ಯವಾಗಿದ್ದಾರೆ. ಹೀಗಾಗಿ ಜಸ್ಪ್ರೀತ್ ಬುಮ್ರಾ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.
PublicNext
24/02/2022 06:56 pm