ಲಕ್ನೋ: ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಅಬ್ಬರದ ಅರ್ಧಶತಕ ಹಾಗೂ ಟೀಂ ಇಂಡಿಯಾ ಬೌಲಿಂಗ್ ದಾಳಿಗೆ ನಲುಗಿದ ಶ್ರೀಲಂಕಾ ತಂಡವು 62 ರನ್‌ಗಳಿಂದ ಹೀನಾಯ ಸೋಲು ಕಂಡಿದೆ.
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕದಿನ ಸ್ಟೇಡಿಯಂನಲ್ಲಿ ಇಂದು ನಡೆದ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತವು 2 ವಿಕೆಟ್ ನಷ್ಟಕ್ಕೆ 199 ರನ್ ದಾಖಲಿಸಿತ್ತು. ಬಳಿಕ ಈ ಟಾರ್ಗೆಟ್ ಬೆನ್ನತ್ತಿದ ಲಂಕಾ ತಂಡವು 6ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲು ಮಾತ್ರ ಶಕ್ತವಾಯಿತು.
ಭಾರತದ ಪರ ಇಶಾನ್ ಕಿಶನ್ 89 ರನ್, ಶ್ರೇಯಸ್ ಅಯ್ಯರ್ ಅಜೇಯ 57 ರನ್ ಹಾಗೂ ನಾಯಕ ರೋಹಿತ್ ಶರ್ಮಾ 44 ರನ್ ಗಳಿಸಿದರು. ಇನ್ನು ಭಾರತ ಬೌಲರ್ ಗಳಾದ ವೆಂಕಟೇಶ್ ಅಯ್ಯರ್, ಭುವನೇಶ್ವರ ಕುಮಾರ್ ತಲಾ 2 ವಿಕೆಟ್ ಕಬಳಿಸಿದರೆ, ಯಜುವೇಂದ್ರ ಚಾಹಲ್ ಹಾಗೂ ರವೀಂದ್ರ ಜಡೇಜಾ ತಲಾ 1 ವಿಕೆಟ್ ಕಿತ್ತರು.
PublicNext
24/02/2022 10:41 pm