ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಪಿಎಲ್ 2022 ಟೂರ್ನಿಗೆ ಡೇಟ್‌, ಸ್ಥಳ ನಿಗದಿ- ಶೇ.40 ಪ್ರೇಕ್ಷಕರಿಗೆ ಅವಕಾಶ

ನವದೆಹಲಿ: 10 ತಂಡಗಳನ್ನು ಒಳಗೊಂಡ ಈ ಬಾರಿಯ ಐಪಿಎಲ್ ಟೂರ್ನಿಯು ಮಾರ್ಚ್ 26ರಂದು ಮುಂಬೈನಲ್ಲಿ ಪ್ರಾರಂಭವಾಗಲಿದ್ದು, ಮೇ 29ರಂದು ಮುಕ್ತಾಯಗೊಳ್ಳಲಿದೆ ಎಂದು ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್ ಖಚಿತ ಪಡಿಸಿದ್ದಾರೆ.

ಆಡಳಿತ ಮಂಡಳಿ ಸಭೆ ಮುಕ್ತಾಯದ ನಂತ್ರ ಮಾತನಾಡಿದ ಬ್ರಿಜೇಶ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ಎಂಬ ಎರಡು ಹೊಸ ತಂಡಗಳು ರೋಸ್ಟರ್​ಗೆ ಸೇರ್ಪಡೆಯಾಗಿವೆ. ಲೀಗ್‌ ಹಂತದ ಪಂದ್ಯಗಳನ್ನು ಮುಂಬೈ ಹಾಗೂ ಪುಣೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮುಂಬೈನ 3 ಕ್ರೀಡಾಂಗಣ ಹಾಗೂ ಪುಣೆಯ 1 ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯಲಿದೆ. ಮುಂಬೈಯಲ್ಲಿರುವ ವಾಂಖೆಡೆ ಕ್ರೀಡಾಂಗಣದಲ್ಲಿ 20, ಬ್ರಬೋರ್ನ್‌ 15 ಹಾಗೂ ಡಿ.ವೈ.ಪಾಟೀಲ್‌ ಕ್ರೀಡಾಂಗಣದಲ್ಲಿ 20 ಪಂದ್ಯಗಳು ನಿಗದಿಯಾಗಿವೆ. ಪುಣೆಯಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆಯ ಕ್ರೀಡಾಂಗಣದಲ್ಲಿ 15 ಪಂದ್ಯಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಕಳೆದೆರಡು ಆವೃತ್ತಿಗಳಲ್ಲಿ ಐಪಿಎಲ್ ಪಂದ್ಯ ವೀಕ್ಷಣೆಗೆ ಅವಕಾಶ ಸಿಗದೆ ನಿರಾಸೆ ಅನುಭವಿಸಿದ್ದ ಕ್ರೀಡಾಭಿಮಾನಿಗಳಿಗೆ ಈ ಬಾರಿ ಸಿಹಿ ಸುದ್ದಿ ಸಿಕ್ಕಿದೆ. ಈ ಬಗ್ಗೆ ಮತನಾಡಿರುವ ಐಪಿಎಲ್ ಮುಖ್ಯಸ್ಥ ಬ್ರಿಜೇಶ್ ಪಟೇಲ್‌, ಪ್ರೇಕ್ಷಕರಿಗೆ ಅನುಮತಿ ಸಿಗುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರ್ಕಾರದ ನಿಯಮ ಪ್ರಕಾರ ಶೇ.40ರಷ್ಟು ಪ್ರೇಕ್ಷಕರಿಗೆ ಅನುಮತಿ ಸಿಗುವ ಸಾಧ್ಯತೆ ಇದೆ’ ಎಂದು ಹೇಳಿದ್ದಾರೆ.

Edited By : Vijay Kumar
PublicNext

PublicNext

25/02/2022 09:06 am

Cinque Terre

88.07 K

Cinque Terre

0

ಸಂಬಂಧಿತ ಸುದ್ದಿ