ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ರೋಹಿತ್ ಶರ್ಮಾ ಮುಟ್ಟಿದ್ದೆಲ್ಲ ಚಿನ್ನ'

ನವದೆಹಲಿ: ಟೀಂ ಇಂಡಿಯಾದ ಮಾಜಿ ಬ್ಯಾಟರ್ ಮೊಹಮ್ಮದ್ ಕೈಫ್ ಭಾರತ ಕ್ರಿಕೆಟ್ ತಂಡದ ಬ್ಯಾಟರ್ ರೋಹಿತ್ ಶರ್ಮಾ ಅವರ ನಾಯಕತ್ವವನ್ನು ಹಾಡಿ ಹೊಗಳಿದ್ದಾರೆ.

"ಇತ್ತೀಚಿನ ದಿನಗಳಲ್ಲಿ ರೋಹಿತ್ ಶರ್ಮಾ ಜೊತೆ ಕೈಕುಲುಕಲು ಜಾಗರೂಕರಾಗಿರಬೇಕು. ಏಕೆಂದರೆ ಅವರು ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ. ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟಿಂಗ್, ಆಟಗಾರರ ಬದಲಾವಣೆ, ಬೌಲಿಂಗ್ ಬದಲಾವಣೆಗಳು ಹೀಗೆ ಅವರ ಪ್ರತಿ ನಡೆಯೂ ಮಾಸ್ಟರ್‌ಸ್ಟ್ರೋಕ್" ಎಂದು ಕೈಫ್ ಟ್ವೀಟ್ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತವು ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಟೀಂ ಇಂಡಿಯಾ ಸತತ 11ನೇ ಟಿ20 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಸಾಧನೆ ಮಾಡಿದೆ.

Edited By : Vijay Kumar
PublicNext

PublicNext

27/02/2022 04:56 pm

Cinque Terre

50.72 K

Cinque Terre

0

ಸಂಬಂಧಿತ ಸುದ್ದಿ