ಧರ್ಮಶಾಲಾ: ಶ್ರೀಲಂಕಾ ವಿರುದ್ಧ ಕ್ಲೀನ್ ಸ್ವೀಪ್ ಮೂಲಕ ಟಿ20 ಸರಣಿ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಟ್ರೋಫಿಯನ್ನು ಎತ್ತಿ ಹಿಡಿಯಲು ವಿಶೇಷ ವ್ಯಕ್ತಿಯೊಬ್ಬರನ್ನು ಕರೆತಂದರು. ಇದೀಗ ಅವರು ಯಾರು? ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ನಡೆಯುತ್ತಿದೆ. ಇದಕ್ಕೆ ಇಲ್ಲಿದೆ ನೋಡಿ ಉತ್ತರ.
ರೋಹಿತ್ ಶರ್ಮಾ ಟ್ರೋಫಿಯನ್ನು ಜಯದೇವ್ ಶಾ ಅವರ ಕೈಗೆ ನೀಡಿದರು. ಇವರು ಈ ಮೂರು ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐಯ ಪ್ರತಿನಿಧಿಯಾಗಿದ್ದರು. ಅಲ್ಲದೆ ಇವರು ಸೌರಾಷ್ಟ್ರ ಕ್ರಿಕೆಟ್ ತಂಡದ ಮಾಜಿ ನಾಯಕನಾಗಿದ್ದು, ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 120 ಪಂದ್ಯಗಳನ್ನ ಆಡಿ 5,354 ರನ್ ಕಲೆಹಾಕಿದ್ದಾರೆ. ಜೊತೆಗೆ ಇವರು ಬಿಸಿಸಿಐ ಮಾಜಿ ಕಾರ್ಯದರ್ಶಿ ಮತ್ತು ಕ್ರಿಕೆಟಿಗ ನಿರಂಜನ್ ಶಾ ಅವರ ಮಗ. ಜಯದೇವ್ ಅವರು ಪ್ರಸ್ತುತ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ನ ಅಧ್ಯಕ್ಷರಾಗಿದ್ದಾರೆ.
PublicNext
28/02/2022 04:41 pm