ಎಲ್ಲಾ ಮಾದರಿಯ ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿದಿರುವ ಭಾರತ ಬ್ಯಾಟರ್ ವಿರಾಟ್ ಕೊಹ್ಲಿ, ಸದ್ಯ ವಿಶ್ವ ಕ್ರಿಕೆಟ್‌ನ ಬೆಸ್ಟ್ ಪ್ಲೇಯರ್ ಎನ್ನಿಸಿಕೊಂಡಿದ್ದಾರೆ. ಆಕ್ರಮಣಕಾರಿ ಆಟದ ಮೂಲಕ ವಿರಾಟ್ ತಮ್ಮ ಹೆಸರಿಗೆ ಈಗಾಗಲೇ ಸಾಕಷ್ಟು ದಾಖಲೆಗಳನ್ನು ಬರೆದುಕೊಂಡಿದ್ದಾರೆ. ಇದೀಗ 100ನೇ ಟೆಸ್ಟ್ ಪಂದ್ಯದಲ್ಲಿ ಕೂಡ ವಿರಾಟ್ ಕೊಹ್ಲಿ ಮತ್ತೊಂದು ವಿಶೇಷ ಸಾಧನೆ ಮಾಡುವ ಅವಕಾಶವನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ವೃತ್ತಿ ಜೀವನದಲ್ಲಿ ಮೈಲುಗಲ್ಲಾಗಿರುವ ಈ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶವಿಲ್ಲದಿರುವುದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿತ್ತು. ಹೀಗಾಗಿ ಅಭಿಮಾನಿಗಳು ಅವಕಾಶ ಕಲ್ಪಿಸಲು ಪಟ್ಟು ಹಿಡಿದಿದ್ದರು. ಇದೀಗ ಕಡೆಗೂ ಅಭಿಮಾನಿಗಳ ಒತ್ತಾಯಕ್ಕೆ ಬಿಸಿಸಿಐ ಮಣಿದಿದ್ದು ಮೊಹಾಲಿ ಪಂದ್ಯದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡಲು ಬಿಸಿಸಿಐ ನಿರ್ಧಾರ ತೆಗೆದುಕೊಂಡಿದೆ. ಕ್ರೀಡಾಂಗಣದ ಸಾಮರ್ಥ್ಯದ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಬಿಸಿಸಿಐ ನಿರ್ಧಾರ ಮಾಡಿದೆ.
PublicNext
02/03/2022 07:15 pm