ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ICC Women's World Cup 2022 : ಭಾರತ-ಪಾಕ್ ಮುಖಾಮುಖಿ ಯಾವಾಗ?

2022 ರ ಐಸಿಸಿ ಮಹಿಳಾ ಕ್ರಿಕೆಟ್ ಏಕದಿನ ವಿಶ್ವಕಪ್ ಮಾರ್ಚ್ 4 ರಿಂದ ನ್ಯೂಜಿಲೆಂಡ್ ನಲ್ಲಿ ಶುರುವಾಗಲಿದೆ. ಈ ಬಾರಿ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯುತ್ತಿದ್ದು, ಚಾಂಪಿಯನ್ ಪಟ್ಟಕ್ಕಾಗಿ 29 ದಿನಗಳ ಕಾಲ ಸೆಣಸಾಟ ನಡೆಯಲಿದೆ.

ಕಳೆದ ಬಾರಿ ರನ್ನರ್-ಅಪ್ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ದ ಮಾರ್ಚ್ 6 ರಂದು ಆಡಲಿದೆ. ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ವನಿತೆಯರು ವಿಶ್ವಕಪ್ ಅಭಿಯಾನ ಆರಂಭಿಸಲಿದ್ದಾರೆ.

ಅಗ್ರ 4 ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್ ಪ್ರವೇಶಿಸಲಿದ್ದು, ಸೆಮಿಫೈನಲ್ಸ್ ನಲ್ಲಿ ಗೆಲ್ಲುವ 2 ತಂಡಗಳು ಏಪ್ರಿಲ್ 3 ರಂದು ಕ್ರೈಸ್ಟ್ ಚರ್ಚ್ ನ ಹ್ಯಾಗ್ಲೆ ಓವಲ್ ನಲ್ಲಿ ಫೈನಲ್ ಪಂದ್ಯವಾಡಲಿದ್ದಾರೆ.

6 ಬಾರಿ ಚಾಂಪಿಯನ್ ಆಸ್ಪ್ರೇಲಿಯಾ ಟೂರ್ನಿಯ ಯಶಸ್ವಿ ತಂಡ ಎನಿಸಿಕೊಂಡಿದ್ದು, ಇಂಗ್ಲೆಂಡ್ 4, ನ್ಯೂಜಿಲೆಂಡ್ 1 ಬಾರಿ ಪ್ರಶಸ್ತಿ ಗೆದ್ದಿದೆ.

Edited By : Nirmala Aralikatti
PublicNext

PublicNext

03/03/2022 05:24 pm

Cinque Terre

52.12 K

Cinque Terre

3

ಸಂಬಂಧಿತ ಸುದ್ದಿ