ಮೊಹಾಲಿ: ಶ್ರೀಲಂಕಾ ವಿರುದ್ಧ ಇಂದು ಆರಂಭವಾಗಿರುವ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 85 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 357 ರನ್ ಗಳಿಸಿದೆ.
ಮೊಹಾಲಿಯ ಪಂಜಾಬ್ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ಪರ ಮಯಾಂಕ್ ಅಗರ್ವಾಲ್ 33 ರನ್, ರೋಹಿತ್ ಶರ್ಮಾ 29 ರನ್, ಹನುಮ ವಿಹಾರಿ 58 ರನ್, ವಿರಾಟ್ ಕೊಹ್ಲಿ 45 ರನ್, ರಿಷಭ್ ಪಂತ್ 96 ರನ್, ಶ್ರೇಯಸ್ ಅಯ್ಯರ್ 27 ರನ್ ಗಳಿಸಿದ್ದಾರೆ. ಇನ್ನು ರವೀಂದ್ರ ಜಡೇಜಾ 45 ರನ್ ಹಾಗೂ ಆರ್.ಅಶ್ವಿನ್ 10 ರನ್ ಗಳಿಸಿ ಎರಡನೇ ದಿನದಾಟಕ್ಕೆ ವಿಕೆಟ್ ಕಾಯ್ದುಕೊಂಡಿದ್ದಾರೆ.
ಇನ್ನು ಶ್ರೀಲಂಕಾ ಪರ ಲಸಿತ್ ಎರಡು ವಿಕೆಟ್ ಪಡೆದರೆ, ಸುರಂಗ ಲಕ್ಮಲ್, ವಿಶ್ವ ಫರ್ನಾಂಡೊ, ಲಹಿರು ಕುಮಾರ ಮತ್ತು ಧನಂಜಯ ಡಿ ಸಿಲ್ವಾ ತಲಾ ಒಂದೊಂದು ವಿಕೆಟ್ ಉರುಳಿಸಿದರು.
PublicNext
04/03/2022 05:49 pm