ಮೌಂಟ್ ಮಾಂಗನುಯಿ : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಎದುರು 107 ರನ್ ಗಳ ಅಂತರದಿಂದ ಭಾರತ ಭರ್ಜರಿ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಸಂಘಟಿತ ಪ್ರದರ್ಶನ ತೋರಿದೆ. ರಾಜೇಶ್ವರಿ ಗಾಯಕ್ವಾಡ್ ಪ್ರಮುಖ 4 ವಿಕೆಟ್ ಕಬಳಿಸುವ ಮೂಲಕ ಭಾರತ ತಂಡದ ಗೆಲುವಿಗೆ ಸಾಥ್ ನೀಡಿದ್ದಾರೆ.
ಈ ಗೆಲುವಿನೊಂದಿಗೆ ಪಾಕಿಸ್ತಾನ ಎದುರು ಭಾರತ ತಂಡದ ಅಜೇಯ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಏಕದಿನ ಕ್ರಿಕೆಟ್ ನಲ್ಲಿ 11 ನೇ ಗೆಲುವು ದಾಖಲಿಸಿದರು. ಇಂದು ಬೇ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ನೀಡಿದ್ದ 245 ರನ್ ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು ಸೋಲನ್ನು ಅನುಭವಿಸಿದೆ.
ಪಾಕಿಸ್ತಾನದ ಯಾವ ಬ್ಯಾಟರ್ ಕೂಡಾ ಕನಿಷ್ಠ 20 ರನ್ ಬಾರಿಸಲು ಯಶಸ್ವಿಯಾಗಲಿಲ್ಲ. ಭಾರತ ತಂಡದ ಪರ ರಾಜೇಶ್ವರಿ ಗಾಯಕ್ವಾಡ್ 31 ರನ್ ನೀಡಿ 4 ವಿಕೆಟ್ ಪಡೆದರೆ, ಜೂಲನ್ ಗೋಸ್ವಾಮಿ 2, ಸ್ನೆಹ್ ರಾಣಾ 2, ದೀಪ್ತಿ ಶರ್ಮಾ ಹಾಗೂ ಮೆಘನಾ ಸಿಂಗ್ 1 ವಿಕೆಟ್ ಕಬಳಿಸುವ ಮೂಲಕ ಭಾರತ ತಂಡವು ಭಾರೀ ಅಂತರದ ಗೆಲುವು ದಾಖಲಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದಾರೆ.
PublicNext
06/03/2022 03:15 pm