ಮುಂಬೈ: 15 ನೇ ಆವೃತ್ತಿಯ 2022 ರ ಐಪಿಎಲ್ ವೇಳಾಪಟ್ಟಿ ಇಂದು ಬಿಡುಗಡೆಯಾಗಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರನ್ನರ್ ಅಪ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಉದ್ಘಾಟನಾ ಪಂದ್ಯವಾಡಲಿವೆ.
ಮಾರ್ಚ್ 26 ರಂದು ಐಪಿಎಲ್ ಆರಂಭವಾಗುತ್ತಿದ್ದು, ಮುಂಬೈ ಮತ್ತು ಪುಣೆಯಲ್ಲಿ ಒಟ್ಟು 70 ಲೀಗ್ ಮತ್ತು 4 ಪ್ಲೇ ಆಫ್ ಪಂದ್ಯಗಳು ನಡೆಯಲಿದೆ. ಒಟ್ಟು 65 ದಿನಗಳ ಕಾಲ ಐಪಿಎಲ್ ಕಲರವ ಕಾಣಬಹುದು.
ಟೂರ್ನಿಯಲ್ಲಿ 70 ಲೀಗ್ ಪಂದ್ಯಗಳು ಮತ್ತು ನಾಲ್ಕು ಪ್ಲೇ-ಆಫ್ ಪಂದ್ಯಗಳು ನಿಗದಿಯಾಗಿವೆ. ಮಾರ್ಚ್ 27 ರಂದು ಮೊದಲ ಡಬಲ್ ಹೆಡರ್ ಪಂದ್ಯ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಮತ್ತು ಮುಂಬೈ ತಂಡ ಸೆಣಸಾಡಲಿದೆ. ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡ ಮುಖಾಮುಖಿಯಾಗಲಿವೆ.
ಈ ಮೂಲಕ ಆರ್ ಸಿಬಿ ತನ್ನ ಅಭಿಯಾನ ಆರಂಭಿಸಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ. ಈ ಪಂದ್ಯವು ರಾತ್ರಿ 7.30ಕ್ಕೆ ಸರಿಯಾಗಿ ಆರಂಭವಾಗಲಿದೆ.
PublicNext
06/03/2022 10:14 pm