ಮೊಹಾಲಿ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬೌಲರ್ ಆರ್. ಅಶ್ವಿನ್ ಮಹತ್ವದ ಸಾಧನೆಯೊಂದನ್ನು ಮಾಡಿದ್ದಾರೆ.
ಹೌದು. ಆರ್. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಶ್ರೀಲಂಕಾದ ಚರಿತ್ ಅಸಲಂಕಾ ಅವರನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಔಟ್ ಮಾಡುವ ಮೂಲಕ 35 ವರ್ಷದ ಆಫ್ ಸ್ಪಿನ್ನರ್ ಟೆಸ್ಟ್ ಕ್ರಿಕೆಟ್‌ನಲ್ಲಿ 435ನೇ ವಿಕೆಟ್ ಪಡೆದ ಸಾಧನೆ ಮಾಡಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 434 ವಿಕೆಟ್ ಪಡೆದಿದ್ದ ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರನ್ನು ಅಶ್ವಿನ್ ಹಿಂದಿಕ್ಕಿದ್ದಾರೆ.
ಆರ್.ಅಶ್ವಿನ್ ಅವರು ಕಪಿಲ್‌ಗಿಂತಲೂ ಕಡಿಮೆ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಮಾಜಿ ನಾಯಕ ಹಾಗೂ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ (619) ಅಗ್ರಸ್ಥಾನದಲ್ಲಿದ್ದಾರೆ. ಅಂದಹಾಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೇವಲ 4 ಬೌಲರ್‌ಗಳು ಮಾತ್ರ ಭಾರತದ ಪರ 400ಕ್ಕೂ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಭಾರತದ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್‌ಗಳು:
ಅನಿಲ್ ಕುಂಬ್ಳೆ: 619 ವಿಕೆಟ್
ಆರ್ ಅಶ್ವಿನ್ 434 ವಿಕೆಟ್
ಕಪಿಲ್ ದೇವ್: 434 ವಿಕೆಟ್
ಹರ್ಭಜನ್ ಸಿಂಗ್: 417 ವಿಕೆಟ್
PublicNext
07/03/2022 12:50 pm