ಇಸ್ಲಾಮಾಬಾದ್: ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಅನುಭವಿ ಬ್ಯಾಟರ್ ಮೈದಾನದಲ್ಲೇ ಭಾಂಗ್ರಾ ನೃತ್ಯ ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ.
ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ರಾವಲ್ಪಿಂಡಿ ಮೈದಾನದಲ್ಲಿ ನಡೆಯುತ್ತಿದೆ. ಐದನೇ ದಿನವಾದ ಇಂದು ಪಾಕಿಸ್ತಾನದ ಇನ್ನಿಂಗ್ಸ್ ವೇಳೆ ಮ್ಯೂಸಿಕ್ ಬರುತ್ತಿದ್ದಂತೆ ವಾರ್ನರ್ ನೃತ್ಯ ಮಾಡಲು ಆರಂಭಿಸಿದರು. ಹಾಡಿಗೆ ತಕ್ಕಂತೆ ಪಾಕಿಸ್ತಾನ ಮತ್ತು ಭಾರತದ ಪಂಜಾಬ್‌ನಲ್ಲಿ ಹೆಚ್ಚು ಜನಪ್ರಿಯವಾಗಿರುವ ಭಾಂಗ್ರಾ ನೃತ್ಯ ಮಾಡುವ ಮೂಲಕ ಪ್ರೇಕ್ಷಕರನ್ನು ಮನರಂಜಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
PublicNext
08/03/2022 05:31 pm