ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶ್ರೀಲಂಕಾ ತಂಡವು ಕೇವಲ 109 ರನ್‌ಗಳಿಗೆ ಸರ್ವಪತನ ಕಂಡಿದೆ. ಟೀಂ ಇಂಡಿಯಾ ಮಾರಕ ವೇಗಿ ಜಸ್‌ಪ್ರೀತ್ ಬುಮ್ರಾ ದಾಳಿಗೆ ಪ್ರವಾಸಿ ಲಂಕಾ ತಂಡವು ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. ಇದರೊಂದಿಗೆ ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 143 ರನ್‌ಗಳ ಮೊದಲ ಇನಿಂಗ್ಸ್ ಮುನ್ನಡೆ ಪಡೆದಿದೆ.
PublicNext
13/03/2022 03:37 pm