ಬೆಂಗಳೂರು: ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇದುವರೆಗೂ 29 ಟೆಸ್ಟ್ ಪಂದ್ಯಗಳನ್ನಾಡಿದ್ದು, ಇದೇ ಮೊದಲ ಬಾರಿಗೆ ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯವೊಂದರ ಇನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ಆರಂಭವಾಗಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಬುಮ್ರಾ ಸಾಧನೆ ಮಾಡಿದ್ದಾರೆ.
ಇದುವರೆಗೂ ಬುಮ್ರಾ ವೆಸ್ಟ್ ಇಂಡೀಸ್, ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ನೆಲದಲ್ಲಿ ತಲಾ 2 ಬಾರಿ 5+ ವಿಕೆಟ್ ಕಬಳಿಸಿದ್ದಾರೆ. ಇನ್ನು ಆಸ್ಟ್ರೇಲಿಯಾ ನೆಲದಲ್ಲಿ ಒಮ್ಮೆ 5+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದರು. ಇದೀಗ ವೃತ್ತಿಜೀವನದ 8ನೇ ಬಾರಿಗೆ ಟೆಸ್ಟ್ ಇನಿಂಗ್ಸ್‌ವೊಂದರಲ್ಲಿ 5+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ.
PublicNext
13/03/2022 04:48 pm