ನವದೆಹಲಿ: ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇದೇ ಮಾರ್ಚ್ 26ರಿಂದ ಆರಂಭವಾಗಲಿದ್ದು, ಎಲ್ಲ 10 ತಂಡಗಳೂ ನಾಯಕರನ್ನು ಘೋಷಣೆ ಮಾಡಿವೆ. ಇದೀಗ ಈ ಬಾರಿಯ ಐಪಿಎಲ್‌ನ ನೂತನ ತಂಡವಾಗಿ ಕಣಕ್ಕಿಳಿಯಲಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ತನ್ನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಈ ಜೆರ್ಸಿ ನೀಲಿ ಬಣ್ಣದಿಂದ ಕೂಡಿದ್ದು ತಿಳಿನೀಲಿ ಬಣ್ಣದ ಪಟ್ಟಿಗಳನ್ನೊಂದಿದೆ.
ಇನ್ನು ಗುಜರಾತ್ ಟೈಟಾನ್ಸ್ ತನ್ನ ಜೆರ್ಸಿಯನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ (ಮಾರ್ಚ್ 13 ) ಅನಾವರಣಗೊಳಿಸಿದ್ದು, ಈ ವಿಶೇಷ ಕಾರ್ಯಕ್ರಮದಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯ ಕೆಲ ಸದಸ್ಯರೂ ಸಹ ಭಾಗವಹಿಸಿದ್ದರು.
ಗುಜರಾತ್ ಟೈಟಾನ್ಸ್ ತಂಡದ ಆಟಗಾರರು:
ಹಾರ್ದಿಕ್ ಪಾಂಡ್ಯ, ರಶೀದ್ ಖಾನ್, ಶುಭ್ಮನ್ ಗಿಲ್, ಮೊಹಮ್ಮದ್ ಶಮಿ, ರಹಮಾನುಲ್ಲಾ ಗುರ್ಬಾಜ್, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಸಾಯಿ ಕಿಶೋರ್, ವಿಜಯ್ ಶಂಕರ್, ಜಯಂತ್ ಯಾದವ್, ಡೊಮಿನಿಕ್ ಡ್ರೇಕ್ಸ್, ದರ್ಶನ್ ನಲ್ಕಂಡೆ, ಪ್ರದೀಪ್ ನಲ್ಕಂಡೆ, ಯಶ್ವಾನ್ ದಯಾಳ್ , ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್.
PublicNext
14/03/2022 03:04 pm