ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs SL: ಟೀಂ ಇಂಡಿಯಾ ಬೌಲಿಂಗ್ ದಾಳಿಗೆ ಲಂಕಾ ತತ್ತರ- ಟೆಸ್ಟ್ ಸರಣಿ ಭಾರತದ ವಶ

ಬೆಂಗಳೂರು: ಜಸ್‌ಪ್ರೀತ್ ಬುಮ್ರಾ, ಆರ್‌. ಅಶ್ವಿನ್ ಬೌಲಿಂಗ್ ದಾಳಿಗೆ ತತ್ತರಿಸಿದ ಲಂಕಾ ಪಡೆ ಭಾರತದ ವಿರುದ್ಧ 238 ರನ್ ಅಂತರದಿಂದ ಸೋಲು ಕಂಡಿದೆ. ಇದರೊಂದಿಗೆ ಭಾರತವು 2-0 ಅಂತರಗಳಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಡೇ ಆ್ಯಂಡ್ ನೈಟ್‌ ಟೆಸ್ಟ್‌ನಲ್ಲಿಯೂ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 59.1 ಓವರ್‌ಗಳಲ್ಲಿ 252 ರನ್‌ಗಳಿಗೆ ಸರ್ವಪತನ ಕಂಡಿತ್ತು. ಬಳಿಕ ಬ್ಯಾಟಿಂಗ್ ಮಾಡಿದ್ದ ಲಂಕಾ ತಂಡವು 35.5 ಓವರ್‌ಗಳಲ್ಲಿ ಕೇವಲ 109 ರನ್‌ ಮಾತ್ರ ಗಳಿಸಲು ಶಕ್ತವಾಗಿತ್ತು.

ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು 68.5 ಓವರ್‌ಗಳಲ್ಲಿ 9 ನಷ್ಟಕ್ಕೆ 303 ರನ್‌ ಗಳಿಸಿ ಡಿಕ್ಲೇರ್ ಘೋಷಿಸಿತ್ತು. ಈ ಬೃಹತ್ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಲಂಕಾ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 59.3 ಓವರ್‌ಗಳಲ್ಲಿ 208 ರನ್‌ ಗಳಿಸಿ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲಿಗೆ ಗುರಿಯಾಯಿತು.

Edited By : Vijay Kumar
PublicNext

PublicNext

14/03/2022 06:05 pm

Cinque Terre

41.06 K

Cinque Terre

1

ಸಂಬಂಧಿತ ಸುದ್ದಿ