ನವದೆಹಲಿ: ಐಪಿಎಲ್ 2022ರ ಟೂರ್ನಿಯ ಆರಂಭಕ್ಕೆ ಇನ್ನು 11 ದಿನಗಳು ಮಾತ್ರವೇ ಬಾಕಿಯಿದೆ. ಈಗಾಗಲೇ ವಿದೇಶಿ ಆಟಗಾರರು ಕೂಡ ಭಾರತಕ್ಕೆ ಆಗಮಿಸುತ್ತಿದ್ದು, ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಈ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್ ಶೇನ್ ವಾಟ್ಸನ್ ಸಹಾಯಕ ಕೋಚ್ ಆಗಿ ಸೇರ್ಪಡೆಯಾಗುತ್ತಿರುವುದನ್ನು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಐಪಿಎಲ್‌ನಲ್ಲಿ ಹಲವು ಆವೃತ್ತಿಗಳಲ್ಲಿ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದ ಶೇನ್ ವಾಟ್ಸನ್ ಪ್ರಸ್ತುತ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಆದರೆ ಈ ಬಾರಿಯ ಆವೃತ್ತಿಯಲ್ಲಿ ಕೋಚಿಂಗ್ ಸಿಬ್ಬಂದಿಯಾಗಿ ಐಪಿಎಲ್‌ನಲ್ಲಿ ಮತ್ತೊಂದು ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಶೇನ್ ವಾಟ್ಸನ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಳ್ಳಲು ಭಾರತಕ್ಕೆ ತೆರಳುತ್ತಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರು:
ರಿಷಭ್ ಪಂತ್ (ನಾಯಕ), ಪೃಥ್ವಿ ಶಾ, ಅನ್ರಿಚ್ ನಾರ್ಟ್ಜೆ, ಅಕ್ಷರ್ ಪಟೇಲ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ಕುಲದೀಪ್ ಯಾದವ್, ಅಶ್ವಿನ್ ಹೆಬ್ಬಾರ್, ಸರ್ಫರಾಜ್ ಖಾನ್, ಕಮಲೇಶ್ ನಾಗರಕೋಟಿ, ಕೆಎಸ್ ಭರತ್, ಮನದೀಪ್ ಸಿಂಗ್, ಖಲೀಲ್ ಅಹ್ಮದ್, ಚೇತನ್ ಸಕರಿಯಾ, ಲಲಿತ್ ಯಾದವ್, ರಿಪಾಲ್ ಪಟೇಲ್, ಯಶ್ ಧುಲ್, ರೋವ್ಮನ್ ಪೊವೆಲ್, ಪ್ರವೀಣ್ ದುಬೆ, ಲುಂಗಿ ಎನ್ಗಿಡಿ, ಟಿಮ್ ಸೀಫರ್ಟ್, ವಿಕ್ಕಿ ಓಸ್ತ್ವಾಲ್
PublicNext
15/03/2022 05:06 pm