ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ ಕ್ಯಾಪಿಟಲ್ಸ್ ತಂಡದ ಬಸ್ ಮೇಲೆ ದಾಳಿ- ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈ: ದೆಹಲಿ ಕ್ಯಾಪಿಟಲ್ಸ್ ತಂಡದ ಬಸ್ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ದುಷ್ಕರ್ಮಿಗಳ ವಿರುದ್ಧ ಮುಂಬೈ ಪೊಲೀಸರು ಬುಧವಾರ ಎಫ್‍ಐಆರ್ ದಾಖಲಿಸಿದ್ದಾರೆ.

ಮುಂಬೈನ ಕೊಲಾಬಾ ಪ್ರದೇಶದಲ್ಲಿರುವ ತಾಜ್ ಪ್ಯಾಲೇಸ್ ಎಂಬ ಹೋಟೆಲ್‌ನಲ್ಲಿ ದೆಹಲಿ ಕ್ಯಾಪಿಟಲ್ಸ್‌ ತಂಡವು ತಂಗಿದೆ. ಐಪಿಎಲ್ ಪಂದ್ಯಗಳಿಗೆ ಆಟಗಾರರನ್ನು ಕರೆತರಲು 5-ಸ್ಟಾರ್ ಹೋಟೆಲ್‌ನ ಹೊರಗೆ ಮಾರ್ಚ್ 16ರಂದು ಐಷಾರಾಮಿ ಬಸ್‌ಗಳನ್ನು ನಿಲ್ಲಿಸಲಾಗಿತ್ತು. ಈ ವೇಳೆ ಅಲ್ಲಿಗೆ ಬಂದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಬಸ್‌ಗಳ ಗಾಜುಗಳನ್ನು ಒಡೆದು ದುಷ್ಕೃತ್ಯ ಮೆರೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 147, 149, 427ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

Edited By : Vijay Kumar
PublicNext

PublicNext

16/03/2022 04:30 pm

Cinque Terre

55.94 K

Cinque Terre

0

ಸಂಬಂಧಿತ ಸುದ್ದಿ