ಐಪಿಎಲ್ 15 ನೇ ಆವೃತ್ತಿಯಲ್ಲಿ ಗುಜರಾತ್ ಟೈಟನ್ಸ್ ಅನ್ನು ಮುನ್ನಡೆಸಲಿರುವ ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಯೊ ಯೊ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.
ಮಾ. 26 ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಹಂಗಾಮ ಶುರುವಾಗಲಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜಿಯಂಟ್ಸ್ ನೂತನ ತಂಡಗಳಾಗಿ ಕಣಕ್ಕಿಳಿಯುತ್ತಿವೆ. ಲಕ್ನೋ ಸೂಪರ್ ಜಿಯಂಟ್ಸ್ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಿದರೆ, ಗುಜರಾತ್ ಟೈಟನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.
ಸದ್ಯ ಗಾಯದ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಹಾರ್ದಿಕ್ ಪಾಂಡ್ಯ ಫಿಟ್ ನೆಸ್ ಕುರಿತು ಸಾಕಷ್ಟು ಅನುಮಾನಗಳಿದ್ದವು. ಅಂತರರಾಷ್ಟ್ರೀಯ ತಂಡದಿಂದ ಹೊರಗುಳಿಯುವಷ್ಟು ಸಮಸ್ಯೆಗೊಳಗಾಗಿರುವ ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸುವಷ್ಟು ಶಕ್ತರಾಗಿದ್ದಾರಾ ಎಂಬ ಸಂಶಕ್ಕೆ ಸದ್ಯ ತೆರೆ ಬಿದ್ದಿದೆ.
ಹಾರ್ದಿಕ್ ಪಾಂಡ್ಯಾ, (NCA) ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಯೊಯೊ ಟೆಸ್ಟ್ ನ್ನು ಯಶಸ್ವಿಯಾಗಿ ಪೂರೈಸಿದ್ದು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಣಕ್ಕಿಳಿದು ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ಫಿಟ್ ನೆಸ್ ಪರೀಕ್ಷೆಯಲ್ಲಿ ಗಂಟೆಗೆ 135 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯಾ
ಇನ್ನು ಹಾರ್ದಿಕ್ ಪಾಂಡ್ಯಾ ಈ ಯೊ ಯೊ ಟೆಸ್ಟ್ ಪಾಸ್ ಆಗಿರುವುದು ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಅವಕಾಶವನ್ನು ತಂದುಕೊಡಲಿದೆಯಾ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.
ಒಟ್ಟಾರೆಯಲ್ಲಿ ಹಾರ್ದಿಕ್ ಪಾಂಡ್ಯಾ 17+ ಅಂಕಗಳೊಂದಿಗೆ ಈ ಯೊ ಯೊ ಟೆಸ್ಟ್ನ್ನು ಪೂರೈಸಿದ್ದು, ಶೀಘ್ರದಲ್ಲಿಯೇ ಗುಜರಾತ್ ಟೈಟನ್ಸ್ ತರಬೇತಿ ಶಿಬಿರವನ್ನು ಸೇರಿಕೊಳ್ಳಲಿದ್ದಾರೆ.
PublicNext
17/03/2022 02:03 pm