ಬೆಂಗಳೂರು: ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್, ಆರ್‌ಸಿಬಿಯ ಗ್ಲೆನ್ ಮ್ಯಾಕ್ಸ್‌ವೆಲ್ ಮಾರ್ಚ್ 18ರಂದು ಚೆನ್ನೈ ಮೂಲದ ವಿನಿ ರಾಮನ್ ಜೊತೆ ವೈವಾಹಿದ ಜೀವನಕ್ಕೆ ಕಾಲಿಟ್ಟಿದ್ದಾರೆ.
ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ವಿನಿ ರಾಮನ್ ಮಾರ್ಚ್ 27ರಂದು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ದೊಡ್ಡಮಟ್ಟದಲ್ಲಿ ವೈರಲ್ ಆಗಿತ್ತು. ಮ್ಯಾಕ್ಸ್‌ವೆಲ್ ಮತ್ತು ವಿನಿ ರಾಮನ್ ವಿವಾಹದ ತಮಿಳು ಆಮಂತ್ರಣ ಪತ್ರಿಕೆಯ ಚಿತ್ರವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆದರೆ ಇದೀಗ ವಿನಿ ರಾಮನ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ವಿವಾಹದ ಚಿತ್ರಗಳನ್ನು ಹಂಚಿಕೊಂಡಿದ್ದು, ವಿವಾಹ ಮಾರ್ಚ್ 18ರ ಶುಕ್ರವಾರದಂದೇ ನಡೆದಿದೆ ಎಂಬುದು ಬಹಿರಂಗವಾಗಿದೆ.
PublicNext
19/03/2022 03:57 pm