ಕೊಲಂಬೊ: ಏಷ್ಯಾ ಕಪ್‌ನ ಮುಂಬರುವ ಆವೃತ್ತಿಯನ್ನು ಈ ವರ್ಷದ ಕೊನೆಯಲ್ಲಿ ಆಗಸ್ಟ್ 27 ಮತ್ತು ಸೆಪ್ಟೆಂಬರ್ ನಡುವೆ ನಡೆಯಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಶನಿವಾರ ಪ್ರಕಟಿಸಿದೆ.
ಕೊಲಂಬೊದಲ್ಲಿ ಶನಿವಾರ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಏಷ್ಯಾ ಕಪ್ 2022 ಆಯೋಜನೆ ಡೇಟ್ ಫಿಕ್ಸ್ ಮಾಡಲಾಗಿದೆ. ಈ ಬಾರಿ ಟಿ20 ಮಾದರಿಯಲ್ಲಿ ಏಷ್ಯಾ ಕಪ್ ನಡೆಯಲಿದ್ದು, ಆಗಸ್ಟ್ 27 ರಂದು ಟೂರ್ನಿಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಅಲ್ಲದೆ ಸೆಪ್ಟಂಬರ್ 11 ರಂದು ಫೈನಲ್ ಪಂದ್ಯ ನಡೆಯಲಿದೆ. ವಿಶೇಷ ಎಂದರೆ ಈ ಬಾರಿ ಟಿ20 ವಿಶ್ವಕಪ್ನಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಆದರೆ ಅದಕ್ಕೂ ಮುನ್ನ ಉಭಯ ತಂಡಗಳು ಏಷ್ಯಾ ಕಪ್ನಲ್ಲೂ ಸೆಣಸಾಡಲಿದೆ. ಈ ಬಾರಿ ಏಷ್ಯಾ ಕಪ್ನಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿದ್ದು, ಈಗಾಗಲೇ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನು ಒಂದು ತಂಡವು ಅಂತಿಮವಾಗಬೇಕಿದೆ.
PublicNext
19/03/2022 10:28 pm