ಕೋಲ್ಕತ್ತಾ: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನೋಡಿ ವಾಪಸ್ಸಾಗುತ್ತಿದ್ದ ವೇಳೆ ತಮ್ಮ ಕಾರಿನ ಮೇಲೆ ಬಾಂಬ್ ಎಸೆಯಲಾಗಿದೆ ಎಂದು ಪಶ್ಚಿಮ ಬಂಗಾಳದ ರಾಣಾಘಾಟ್‌ನ ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಆರೋಪಿಸಿದ್ದಾರೆ.
"ನಾವು ಬಾಂಬ್‌ನಿಂದ ಸ್ವಲ್ಪದರಲ್ಲೇ ಪಾರಾಗಿದ್ದೇವೆ. ಬಂಗಾಳದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವವನ್ನು ಕಿತ್ತುಹಾಕಲಾಗಿದೆ" ಎಂದು ಸಂಸದ ಜಗನ್ನಾಥ್ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಒತ್ತಾಯಿಸಿದ್ದಾರೆ.
PublicNext
20/03/2022 11:27 am