ತಿರುವನಂತಪುರಂ: ಕೇರಳದ ಮಲಪ್ಪುರಂನ ಪೂಂಗೋಡ್‌ನಲ್ಲಿ ಫುಟ್‌ಬಾಲ್ ಪಂದ್ಯ ವೀಕ್ಷಣೆ ವೇಳೆ ಭೀಕರ ದುರಂತವೊಂದು ಸಂಭವಿಸಿದ್ದು, ಪ್ರೇಕ್ಷಕರ ಗ್ಯಾಲರಿ ಕುಸಿದು ಬಿದ್ದು 200 ಮಂದಿ ಗಾಯಗೊಂಡಿದ್ದಾರೆ.
ಮಲಪ್ಪುರಂನ ಪೂಂಗೋಡ್‌ನಲ್ಲಿ ನಡೆದ ಫುಟ್ಬಾಲ್ ಪಂದ್ಯದ ವೀಕ್ಷಣೆಗೆ ತಾತ್ಕಾಲಿಕ ಪ್ರೇಕ್ಷಕರು ಕುಳಿತುಕೊಳ್ಳಲು ನಿರ್ಮಿಸಿದ್ದ ಗ್ಯಾಲರಿ ಕುಸಿದು ಬಿದ್ದ ಪರಿಣಾಮ 200 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯುತ್ ಸರಬರಾಜಿಗಾಗಿ ಅಲವಡಿಸಲಾಗಿದ್ದ ಪೋಲ್ ಬಿದ್ದು ಐವರ ಸ್ಥಿತಿ ಗಂಭೀರವಾಗಿದೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವಘಡ ಸಂಭವಿಸಿದಾಗ ಪಂದ್ಯ ವೀಕ್ಷಿಸಲು 2 ಸಾವಿರಕ್ಕೂ ಹೆಚ್ಚು ಮಂದಿ ಗ್ಯಾಲರಿಯಲ್ಲಿ ಸೇರಿದ್ದರು ಎಂದು ವರದಿಯಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಎರಡು ಸ್ಥಳೀಯ ತಂಡಗಳ ನಡುವಿನ ಫೈನಲ್ ಪಂದ್ಯ ವೀಕ್ಷಿಸಲು ಜನರು ಬಂದಿದ್ದರು.
PublicNext
20/03/2022 01:45 pm