ಮುಂಬೈ: 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತಮ್ಮ ಜೊತೆ ಇನಿಂಗ್ಸ್ ಆರಂಭಿಸುವ ಬ್ಯಾಟರ್ ಯಾರೆಂದು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬಹಿರಂಗಪಡಿಸಿದ್ದಾರೆ.
ಕಳೆದ ಹಲವು ಆವೃತ್ತಿಗಳಲ್ಲಿ ರೋಹಿತ್ ಶರ್ಮಾ ಅವರು ಕ್ವಿಂಟನ್ ಡಿ ಕಾಕ್ ಅವರೊಂದಿಗೆ ಓಪನಿಂಗ್ ಬ್ಯಾಟ್ ಮಾಡುತ್ತಿದ್ದರು. ಆದರೆ 2021ರ ಐಪಿಎಲ್ ಆವೃತ್ತಿಯ ಅಂತಿಮ ಹಂತದಲ್ಲಿ ರೋಹಿತ್ ಜೊತೆ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಿದ್ದರು. ಅದರಂತೆ ಅವರು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು.
ಈ ಬಗ್ಗೆ ಮಾತನಾಡಿರುವ ರೋಹಿತ್ ಶರ್ಮಾ, "ನಾನು ಓಪನಿಂಗ್ ಬ್ಯಾಟ್ ಮಾಡುತ್ತೇನೆ. ಅದರಂತೆ ಹಿಂದಿನಿಂದಲೂ ಈ ಕೆಲಸವನ್ನು ಮಾಡುತ್ತಾ ಬಂದಿದ್ದೇನೆ. ಇಶಾನ್ ಕಿಶನ್ ಜೊತೆ ಇನಿಂಗ್ಸ್ ಆರಂಭಿಸಲು ಎದುರು ನೋಡುತ್ತಿದ್ದೇನೆ" ಎಂದು ಹೇಳಿದ್ದಾರೆ.
PublicNext
23/03/2022 10:54 pm