ಚೆನ್ನೈ: 2022ರ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನಾಯಕತ್ವಕ್ಕೆ ದಿಢೀರ್ ರಾಜೀನಾಮೆ ನೀಡಿ ಮಹೇಂದ್ರ ಸಿಂಗ್ ಧೋನಿ, ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಆಲ್‌ರೌಂಡರ್ ರವೀಂದ್ರ ಜಡೇಜಾ ಅವರಿಗೆ ನಾಯಕತ್ವವನ್ನು ಎಂ.ಎಸ್.ಧೋನಿ ಹಸ್ತಾಂತರಿಸಿದ್ದಾರೆ. ಅಲ್ಲದೆ ಓರ್ವ ಆಟಗಾರನಾಗಿ ಮುಂದುವರಿಯಲಿದ್ದಾರೆ. ಧೋನಿ ಅವರ ಈ ದಿಢೀರ್ ನಿರ್ಧಾರದ ಕುರಿತು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಪ್ರತಿಕ್ರಿಯೆ ನೀಡಿದ್ದಾರೆ.
"ಧೋನಿ ತಮ್ಮ ನಾಯಕತ್ವ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿರಬೇಕು ಎಂದು ಬಯಸಿದ್ದರು. ಇವೆಲ್ಲಕ್ಕೂ ಮಿಗಿಲಾಗಿ ರವೀಂದ್ರ ಜಡೇಜಾ ಅವರಿಗೆ ಕಪ್ತಾನಗಿರಿ ವರ್ಗಾಯಿಸಲು ಇದುವೇ ಸೂಕ್ತ ಸಮಯ ಎಂಬುದನ್ನು ಧೋನಿ ಅರಿತುಕೊಂಡಿದ್ದರು. ಇದು ಧೋನಿ ಆಲೋಚನೆಯಲ್ಲಿತ್ತು. ಅಲ್ಲದೆ ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದರು. ತಮ್ಮ ವೃತ್ತಿ ಜೀವನದ ಉತ್ತುಂಗದಲ್ಲಿರುವ ಜಡೇಜಾ ಅವರಿಗೆ ನಾಯಕತ್ವ ವಹಿಸಿಕೊಡಲು ಇದುವೇ ಸೂಕ್ತ ಸಮಯ ಎಂದು ನಂಬಿದ್ದರು. ಫ್ರಾಂಚೈಸ್ ಹಿತದೃಷ್ಟಿಯು ಅವರ ಮನದಲ್ಲಿತ್ತು" ಎಂದು ಕಾಶಿ ವಿಶ್ವನಾಥನ್ ಹೇಳಿದ್ದಾರೆ.
PublicNext
24/03/2022 05:34 pm