ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಹೇಂದ್ರ ಸಿಂಗ್ ಧೋನಿ ದಿಢೀರ್ ರಾಜೀನಾಮೆ ನೀಡಿದ್ದರಿಂದ ನಾಯಕನಾಗಿ ಆಲ್‌ರೌಂಡರ್ ರವೀಂದ್ರ ಜಡೇಜಾ ಆಯ್ಕೆಯಾಗಿದ್ದು, ಈ ಕುರಿತು ಜಡ್ಡು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಜಡೇಜಾ ಪ್ರತಿಕ್ರಿಯೆ ನೀಡಿರುವ ವಿಡಿಯೋವನ್ನು ಸಿಎಸ್‌ಕೆ ಟ್ವೀಟ್ ಮಾಡಿದೆ. ಈ ವಿಡಿಯೋದಲ್ಲಿ ಜಡೇಜಾ, "ತುಂಬಾ ಖುಷಿಯಾಗುತ್ತಿದೆ. ಅದೇ ರೀತಿಯಲ್ಲಿ ದೊಡ್ಡ ಜವಾಬ್ದಾರಿ ಇದೆ. ಏಕೆಂದರೆ ಮಾಹಿ ಭಾಯ್ ದೊಡ್ಡ ಪರಂಪರೆಯನ್ನ ಬೆಳೆಸಿದ್ದಾರೆ. ನಾನು ಅದನ್ನು ಮುಂದುವರಿಸಿಕೊಂಡು ಹೋಗಬೇಕು. ಆದರೆ ಇದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಏಕೆಂದರೆ ಮಾಹಿ ಭಾಯ್ ಯಾವಾಗಲೂ ನನ್ನ ಪ್ರಶ್ನೆಗಳಿಗೆ ಉತ್ತರ ನೀಡುವವರಾಗಿದ್ದು, ಏನೇ ಇದ್ದರೂ ಮೊದಲು ಅವರ ಬಳಿಗೆ ತೆರಳುವೆ. ನಿಮ್ಮ ಪ್ರೀತಿ ಮತ್ತು ಹಾರೈಕೆ, ಶುಭಾಶಯಗಳಿಗೆ ಧನ್ಯವಾದಗಳು" ಎಂದು ಹೇಳಿದ್ದಾರೆ.
PublicNext
24/03/2022 10:56 pm