ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL: KKR vs CSK; ಚೆನ್ನೈಗೆ ಧೋನಿ ಆಶ್ರಯ- ಕೆಕೆಆರ್ ಗೆ 132 ರನ್‌ಗಳ ಗುರಿ

ಮುಂಬೈ: ಮಾಜಿ ನಾಯಕ ಎಂ.ಎಸ್. ಧೋನಿ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 132 ರನ್‌ಗಳ ಗುರಿ ನೀಡಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2022ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 131 ರನ್ ಕಲೆಹಾಕಿದೆ.

ಚೆನ್ನೈ ಪರ ನಾಯಕ ರವೀಂದ್ರ ಜಡೇಜಾ ಅಜೇಯ 26 ರನ್, ಎಂ.ಎಸ್.ಧೋನಿ ಅಜೇಯ 50 ರನ್, ರಾಬಿನ್ ಉತ್ತಪ್ಪ 28 ರನ್ ಗಳಿಸಿದರು. ಇನ್ನು ಕೆಕೆಆರ್ ಪರ ಉಮೇಶ್ ಯಾದವ್ 2 ವಿಕೆಟ್, ವರುಣ್ ಚಕ್ರವರ್ತಿ ಹಾಗೂ ಆ್ಯಂಡ್ರೆ ರಸೆಲ್ ತಲಾ ಒಂದು ವಿಕೆಟ್ ಕಿತ್ತರು.

Edited By : Vijay Kumar
PublicNext

PublicNext

26/03/2022 09:22 pm

Cinque Terre

27.33 K

Cinque Terre

0

ಸಂಬಂಧಿತ ಸುದ್ದಿ