ಮುಂಬೈ: ಅಜಿಂಕ್ಯ ರಹಾನೆ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆದ 2022ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 131 ರನ್ ಕಲೆಹಾಕಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡವು 9 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿ ಗೆದ್ದು ಬೀಗಿದೆ. ಕೆಕೆಆರ್ ತಂಡದ ಪರ ಅಜಿಂಕ್ಯ ರಹಾನೆ 44 ರನ್, ಸ್ಯಾಮ್ ಬಿಲ್ಲಿಂಗ್ಸ್ 25 ರನ್ ಹಾಗೂನಾಯಕ ಶ್ರೇಯಸ್ ಅಯ್ಯರ್ 20 ರನ್ ಗಳಿಸಿದರು.
ಇದಕ್ಕೂ ಮುನ್ನ ಚೆನ್ನೈ ಪರ ನಾಯಕ ರವೀಂದ್ರ ಜಡೇಜಾ ಅಜೇಯ 26 ರನ್, ಎಂ.ಎಸ್.ಧೋನಿ ಅಜೇಯ 50 ರನ್, ರಾಬಿನ್ ಉತ್ತಪ್ಪ 28 ರನ್ ಗಳಿಸಿದ್ದರು. ಇನ್ನು ಕೆಕೆಆರ್ ಪರ ಉಮೇಶ್ ಯಾದವ್ 2 ವಿಕೆಟ್, ವರುಣ್ ಚಕ್ರವರ್ತಿ ಹಾಗೂ ಆ್ಯಂಡ್ರೆ ರಸೆಲ್ ತಲಾ ಒಂದು ವಿಕೆಟ್ ಕಿತ್ತಿದ್ದರು.
PublicNext
26/03/2022 11:07 pm