ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದೆ.
ಮುಂಬೈನ ಡಿ ವೈ ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಟೂರ್ನಿಯ ಭಾಗವಾಗಿ ನಡೆಯುತ್ತಿರುವ ಮೂರನೇ ಪಂದ್ಯವು ಆರ್‌ಸಿಬಿ ಹಾಗೂ ಪಂಜಾಬ್ ತಂಡಗಳ ಪಾಲಿಗೆ ಮೊದಲ ಹಣಾಹಣಿಯಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿ ಮುಡಿಗೇರಿಸಿಕೊಳ್ಳಲು ಎದುರು ನೋಡುತ್ತಿರುವ ಆರ್‌ಸಿಬಿ ತಂಡ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸುವ ಮೂಲಕ 2022ರ ಆವೃತ್ತಿಯ ಅಭಿಯಾನವನ್ನು ಆರಂಭಿಸಲಿದೆ.
PublicNext
27/03/2022 07:12 pm