ಮುಂಬೈ: ಭಾರಿ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 5 ವಿಕೆಟ್‌ಗಳಿಂದ ಗೆದ್ದು ಬೀಗಿದೆ.
ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2022ರ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡವು 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 2 ಎಸೆತಗಳು ಬಾಕಿ ಇರುವಂತೆ 5 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಗೆದ್ದು ಬೀಗಿದೆ.
ಗುಜರಾತ್ ಪರ ರಾಹುಲ್ ತೆವಾಟಿಯಾ ಅಜೇಯ 40 ರನ್, ಮ್ಯಾಥ್ಯೂ ವೇಡ್ 30 ರನ್, ನಾಯಕ ಹಾರ್ದಿಕ್ ಪಾಂಡ್ಯ 33 ರನ್, ಡೇವಿಡ್ ಮಿಲ್ಲರ್ 30 ರನ್ ಹಾಗೂ ಅಭಿನವ್ ಮನೋಹರ್ ಅಜೇಯ 15 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
PublicNext
29/03/2022 07:20 am