ಮುಂಬೈ: ನಾಯಕ ಸಂಜು ಸ್ಯಾಮ್ಸನ್ ಸ್ಫೋಟಕ ಅರ್ಧಶತಕ ಹಾಗೂ ಕನ್ನಡಿಗ ದೇವದತ್ ಪಡಿಕ್ಕಲ್ ಭರ್ಜರಿ ಬ್ಯಾಟಿಂಗ್ ಸಹಾಯದಿಂದ ರಾಜಸ್ಥಾನ ರಾಯಲ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 211 ರನ್‌ಗಳ ಗುರಿ ನೀಡಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2022ರ 5ನೇ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡವು 6 ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿದೆ.
ರಾಜಸ್ಥಾನ್ ಪರ ನಾಯಕ ಸಂಜು ಸ್ಯಾಮ್ಸನ್ 55 ರನ್, ದೇವದತ್ ಪಡಿಕ್ಕಲ್ 41 ರನ್, ಜೋಸ್ ಬಟ್ಲರ್ 35 ರನ್, ಯಶಸ್ವಿ ಜೈಸ್ವಾಲ್ 20 ರನ್, ಶಿಮ್ರಾನ್ ಹೆಟ್ಮೆಯರ್ 33 ರನ್ ಹಾಗೂ ರಿಯಾನ್ ಪರಾಗ್ 12 ರನ್ ಗಳಿಸಿದರು.
PublicNext
29/03/2022 09:24 pm