ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಇಂದು ಮುಖಾಮುಖಿಯಾಗಲಿವೆ. ಇತ್ತೀಚೆಗೆ ನಡೆದ ತನ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ವಿರುದ್ಧ ಸೋತಿದೆ. ಬರೋಬ್ಬರಿ 205 ರನ್ ಬಾರಿಸಿದರೂ ಬೌಲರ್‌ಗಳ ಎಡವಟ್ಟಿನಿಂದ ಸೋಲುಂಡಿತು. ಇಂದು ಎರಡನೇ ಪಂದ್ಯಕ್ಕೆ ಆರ್ಸಿಬಿ ಸಿದ್ಧತೆ ನಡೆಸಿಕೊಂಡಿದೆ.
ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕೆಕೆಆರ್ ವಿರುದ್ಧ ಆರ್ಸಿಬಿ ಸೆಣಸಲಿದೆ. ಈಗಾಗಲೇ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನೇ ಸೋಲಿಸಿರೋ ಶ್ರೇಯಸ್ ಐಯ್ಯರ್ ಪಡೆ ಆರ್ಸಿಬಿ ಜತೆ ಜಿದ್ದಾಜಿದ್ದಿ ನಡೆಸಲಿದೆ.
ಸಂಭಾವ್ಯ ಆಡುವ ಬಳಗ
ಆರ್ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಅನುಜ್ ರಾವತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶೆರ್ಫಾನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್
ಕೆಕೆಆರ್: ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಉಮೇಶ್ ಯಾದವ್, ಶಿವಂ ಮಾವಿ, ವರುಣ್ ಚಕ್ರವರ್ತಿ
PublicNext
30/03/2022 07:28 am