ವಾಷಿಂಗ್ಟನ್: ಟೀಂ ಇಂಡಿಯಾ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುತ್ತಿದ್ದಾರೆ. ಮೊನ್ನೆಯಷ್ಟೇ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧದ ಪಂದ್ಯದಲ್ಲಿ ಅವರು ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಶಮಿ ಅವರ ಈ ಆಟಕ್ಕೆ ಅಮೆರಿಕದ ಪೋರ್ನ್ ಫಿಲ್ಮ್ ನಟಿ ಫಿದಾ ಆಗಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅಮೆರಿಕದ ಪೋರ್ನ್ ನಟಿ ಕೆಂಡ್ರಾ ಲಸ್ಟ್, "ಶಮಿ ಅವರಿಂದ ಅದ್ಭುತ ಪ್ರದರ್ಶನ" ಎಂದು ಅವರು ಬರೆದುಕೊಂಡಿದ್ದಾರೆ.
ಲಕ್ನೋ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿ 4 ಓವರ್ ಬೌಲಿಂಗ್ ಮಾಡಿ 25 ರನ್ ನೀಡಿ ಪ್ರಮುಖ 3 ವಿಕೆಟ್ ಉರುಳಿಸಿದ್ದರು. ಇದರೊಂದಿಗೆ ಶಮಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಈ ಪಂದ್ಯವನ್ನು ಗುಜರಾತ್ ತಂಡವು ಐದು ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು.
PublicNext
30/03/2022 02:16 pm