ಮುಂಬೈ: ನಾಯಕ ಮಯಾಂಕ್ ಅಗರ್ವಾಲ್, ಶಿಖರ್ ಧವನ್ ಸೇರಿದಂತೆ ಪ್ರಮುಖ ಆಟಗಾರರು ಬ್ಯಾಟಿಂಗ್ ವೈಫಲ್ಯ ತೋರಿದ ಪರಿಣಾಮ ಪಂಜಾಬ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 138 ರನ್ಗಳ ಗುರಿ ನೀಡಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಐಪಿಎಲ್2022ನೇ ಟೂರ್ನಿಯ 8ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು 18.2 ಓವರ್ಗಳಲ್ಲಿ ಎಲ್ಲಾ 10 ವಿಕೆಟ್ ಕಳೆದುಕೊಂಡು 137 ರನ್ ಗಳಿಸಲು ಶಕ್ತವಾಯಿತು.
PublicNext
01/04/2022 09:28 pm