ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ಡಿ.ವೈ. ಪಾಟೀಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್ 15ನೇ ಆವೃತ್ತಿಯ ಭಾಗವಾಗಿ ನಡೆಯುತ್ತಿರುವ 9ನೇ ಪಂದ್ಯದಲ್ಲಿ ಇಂದು ಮುಂಬೈ ಮತ್ತು ರಾಜಸ್ಥಾನ್ ತಂಡಗಳು ಮುಖಾಮುಖಿಯಾಗುತ್ತಿವೆ. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತನ್ನ ಮೊದಲ ಪಂದ್ಯದಲ್ಲಿಯೇ ದೆಹಲಿ ಕ್ಯಾಪಿಟಲ್ಸ್ ಎದುರು 4 ವಿಕೆಟ್‌ಗಳ ಸೋಲು ಕಂಡಿತ್ತು. ಹೀಗಾಗಿ ರೋಹಿತ್ ಪಡೆಗೆ ಈ ಪಂದ್ಯ ಬಹುಮುಖ್ಯವಾಗಿದೆ. ಬ್ಯಾಟಿಂಗ್-ಬೌಲಿಂಗ್ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಬಲಿಷ್ಠವಾಗಿರುವ ರಾಜಸ್ಥಾನ್‍ಗೆ ಮುಂಬೈ ಹೇಗೆ ಸವಾಲು ಒಡ್ಡಲಿದೆ ಅನ್ನೋದು ಕುತೂಹಲ ಕೆರಳಿಸಿದೆ.
PublicNext
02/04/2022 03:18 pm